ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪೆಲೆಟ್ ಗನ್ ದಾಳಿಗೆ ಒಳಗಾದ 19 ವರ್ಷದ ಸಾಹಿಲ್ ಲೋಚಬ್ ಅವರೊಂದಿಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ದೂರು ದಾಖಲಾಗುವವರೆಗೆ ಠಾಣೆಯಲ್ಲೇ ಇರುವುದಾಗಿ ರಾಹುಲ್ ಹೇಳಿದ್ದಾರೆ. ದೆಹಲಿ ಪೊಲೀಸರು ದೂರು ಸ್ವೀಕರಿಸಿ ತನಿಖೆಗೆ ಕ್ರಮ ಕೈಗೊಂಡಿದ್ದಾರೆ.
ಪೆಲೆಟ್ ಗನ್ ಸಂತ್ರಸ್ತನೊಂದಿಗೆ ರಾಹುಲ್ ಗಾಂಧಿ ಧರಣಿ
Source: Vishwavani