ಬಾವಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಶವ ಪತ್ತೆ, ತಂದೆ ನಾಪತ್ತೆ

ಬಾವಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಶವ ಪತ್ತೆ, ತಂದೆ ನಾಪತ್ತೆ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ಇಬ್ಬರು ಹೆಣ್ಣುಮಕ್ಕಳ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ತಂದೆ ಸಾಬಣ್ಣ ಬರಗಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ದಿನ ತಾಯಿ ಇಬ್ಬರು ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಮೃತರನ್ನು ಸಾಕ್ಷಿ (15) ಮತ್ತು ರಕ್ಷಿತಾ (10) ಎಂದು ಗುರುತಿಸಲಾಗಿದೆ. ತಾಯಿ ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Source: Vijaya Karnataka

More in Top Stories

Read the live feed on ZapIndies