ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಬೊಲೆರೋ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾಗ್ಯಶ್ರೀ(35), ಸತ್ಯಮ್ಮ(30), ಹೊನ್ನಿಂಗಮ್ಮ(18) ಮೃತರು. ಅಪಘಾತದಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಶಹಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾದಗಿರಿಯಲ್ಲಿ ಬೊಲೆರೋ ಅಪಘಾತ: ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವು
Source: Zee Kannada News