ಭಟ್ಕಳದ ಗುಲ್ಮಿ ಪ್ರದೇಶದ ಮಸ್ಜಿದ್-ಎ-ಇಸ್ಮಾಯಿಲ್‌ಗೆ ಬುಧವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು ಕಿಟಕಿ ಗಾಜು ಜಖಂಗೊಂಡಿದೆ. ಈ ಸಂಬಂಧ ಭಟ್ಕಳ ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿದ್ದಾರೆ. ಘಟನೆ ನಂತರ ನೂರಾರು ಜನರು ಠಾಣೆ ಎದುರು ಜಮಾಯಿಸಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸ್ಥಳ ಪರಿಶೀಲನೆ ನಡೆಸಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಭಟ್ಕಳದಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಗೆ ಕಲ್ಲು ತೂರಾಟ; ಕಿಟಕಿ ಗಾಜು ಜಖಂ
Source: Bhatkallys