ಕೇರಳದ ಮಲಪ್ಪುರಂ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಭೂಕುಸಿತ ಹಾಗೂ ಹಠಾತ್ ಪ್ರವಾಹ ಸಂಭವಿಸಿ ಕನಿಷ್ಠ ಐವರು ಮೃತಪಟ್ಟಿದ್ದಾರೆ, ಇಬ್ಬರು ನಾಪತ್ತೆಯಾಗಿದ್ದಾರೆ. ಮಲಪ್ಪುರಂನ ನಿಲಂಬೂರ್–ಅಮರಂಬಲಂ ಬಳಿ ಕೊಟ್ಟಪುಳ ನದಿಯಲ್ಲಿ ಜನರು ಪ್ರವಾಹಕ್ಕೆ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಮುಖ್ಯಮಂತ್ರಿ ವಿ.ಡಿ. ಸತೀಶನ್ ಪರಿಸ್ಥಿತಿ ಗಂಟೆಗೊಮ್ಮೆ ಪರಿಶೀಲಿಸುವಂತೆ ಸೂಚಿಸಿದ್ದಾರೆ.
ಕೇರಳದಲ್ಲಿ ಭಾರಿ ಮಳೆ: ಭೂಕುಸಿತ, ಪ್ರವಾಹಕ್ಕೆ ಐವರು ಬಲಿ
Source: Zee Kannada News